ಉಡುಪಿ :ಅರಿವು ಸಾಲ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ)ದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿ.ಇ.ಟಿ, ಪಿ.ಜಿ-ಸಿಇಟಿ ಹಾಗೂ ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ ಆಯುಷ್), ಇಂಜಿನಿಯರಿಂಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್,), ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್ (ಬಿ.ಆರ್ಕ್, ಎಂ.
ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಇನ್ ಹಾರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೇರಿ ಟೆಕ್ನಾಲಜಿ, ಫಾರೆಸ್ಟಿ, ವೆಟರಿನರಿ ಅಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್ ಫುಡ್ ನ್ಯೂಟ್ರಿಷನ್ಸ್
ಅಂಡ್ ಡಯಟಿಟಿಕ್ಸ್, ಬಿ ಫಾರ್ಮಾ, ಎಂ.ಫಾರ್ಮಾ, ಫಾರ್ಮಾ ಡಿ ಅಂಡ್ ಡಿ ಫಾರ್ಮಾಗಳಲ್ಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ
ವಿದ್ಯಾರ್ಥಿಗಳಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ನಿಗಮದ ವೆಬ್‌ಸೈಟ್ https://kmdconline.Karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ತಾಲೂಕು ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990, ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ: 0820-2574990ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-
230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.