ಉಡುಪಿ: ಆ.26ರಂದು ಟೈಗರ್ಸ್ ಫ್ರೆಂಡ್ಸ್ ನ ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಾ ಜನ್ಮಾಷ್ಟಮಿಯ ಪ್ರಯುಕ್ತ ಟೈಗರ್ಸ್ ಫ್ರೆಂಡ್ಸ್ ಉಡುಪಿ ವತಿಯಿಂದ ತೃತೀಯ ವರ್ಷದ “ಅಬ್ಬರದ ಉಡುಪಿ ಪಿಲಿನಲಿಕೆ ಕಾರ್ಯಕ್ರಮ” ಇದೇ ಆ.26ರಂದು ಕುಂಜಿಬೆಟ್ಟು ಮೀನುಮಾರುಕಟ್ಟೆ ಬಳಿಯ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4.30ಕ್ಕೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅಧ್ಯಕ್ಷತೆ ವಹಿಸಲಿದ್ದಾರೆ. ದೊಡ್ಡಣಗುಡ್ಡೆ ಶ್ರೀ ದುರ್ಗಾ ಕ್ಷೇತ್ರದ ಧರ್ಮದರ್ಶಿ ರಮಾನಂದ ಗುರೂಜಿ ಹಾಗೂ ಶಂಕರಪುರ ಸಾಯಿ ಈಶ್ವರ್ ಆರ್ಶೀವಚನ ನೀಡಲಿದ್ದಾರೆ. ಉದ್ಯಮಿ ಡಾ.ಜಿ ಶಂಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

Oplus_0

ಹುಲಿವೇಷ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ 1,00,001 ರೂ, ದ್ವೀತಿಯ 50,001 ಹಾಗೂ ವೈಯಕ್ತಿಕ ಕುಣಿತಕ್ಕೆ 5,001 ರೂ ಹಾಗು ವಿಜೇತರಿಗೆ ಶಾಶ್ವತ ಫಲಕ ನೀಡಿ ಗೌರವಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶೋರ್ ದಿ ಬ್ಯಾಂಡ್, ಲೈವ್ ಮ್ಯೂಸಿಕ್, ರಿಥಮ್ ಡ್ಯಾನ್ಸ್ ಅಕಾಡೆಮಿ ಹಾಗು ಅನೇಕ ಚಲನಚಿತ್ರ ನಟ, ನಟಿಯರು ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಶಶಿರಾಜ್ ಕುಂದರ್ ಮಾತನಾಡಿ, ಆ.25 ರಂದು ಮುದ್ದುಕೃಷ್ಣ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದ್ದು, ಪ್ರಥಮ 5001 ರೂ, ದ್ವೀತಿಯ 2,501 ರೂ, ತೃತೀಯ 1501 ರೂ ಹಾಗೂ 10 ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು. ಈ ಬಾರಿ ಎರಡು ಅಂಗನವಾಡಿ ಹಾಗೂ ಪೋಷಕರನ್ನು ಕಳೆದುಕೊಂಡ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಹಾಯ ಮಾಡುತ್ತೇವೆ ಎಂದರು.

ಸುದ್ದಿಗೋಷ್ಟಿಯಲ್ಲಿ ಪ್ರಮುಖರಾದ ಭೋಜ ಶೇರಿಗಾರ್, ಹರೀಶ್ ಪೂಜಾರಿ, ರೂಪೇಶ್ ಕಲ್ಮಾಡಿ ಉಪಸ್ಥಿತರಿದ್ದರು.