ಉಡುಪಿ: ಎಸ್ ಡಿಪಿಐ ಬೆಂಬಲದೊಂದಿಗೆ ಬಂಟ್ವಾಳ ಪುರಸಭೆಯಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್

ಉಡುಪಿ: ಎಸ್ ಡಿಪಿಐ ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ ಇದರಿಂದ ಬಯಲಾಗಿದೆ. ಎಸ್ ಡಿಪಿಐ ವಿಚಾರದಲ್ಲಿ ಕಾಂಗ್ರೆಸ್ ನದು ಸದಾ ದ್ವಂದ್ವ ನಿಲುವು. ತನ್ನ ಅನುಕೂಲತೆಗೆ ತಕ್ಕಂತೆ ಈ ಸಂಬಂಧವನ್ನು ನೈತಿಕ ಹಾಗೂ ಅನೈತಿಕವಾಗಿಟ್ಟುಕೊಳ್ಳುವುದು ಕಾಂಗ್ರೆಸ್ ಗೆ ಚಾಳಿಯಾಗಿದೆ. ಎಸ್ಡಿಪಿಐ ಕಾಂಗ್ರೆಸ್ ಬಿ ಟೀಂ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಟೀಕಿಸಿದರು.

ರಾಜ್ಯಪಾಲರ ನಿವಾಸಕ್ಕೆ ಬಾಂಗ್ಲಾ ಮಾದರಿಯಲ್ಲಿ ನುಗ್ಗುತ್ತೇವೆ ಎಂದ ಕಾಂಗ್ರೆಸ್ ಎಂಎಲ್ ಸಿ ಐವಾನ್ ಡಿಸೋಜಾ ಅವರ ಹೇಳಿಕೆ ಎಸ್ ಡಿಪಿಐ ಜತೆ ಕಾಂಗ್ರೆಸ್ ಪುನರ್ವಿವಾಹದ ಸೂಚನೆ ಎನ್ನಬಹುದಾಗಿದೆ. ಈ ಹೊಂದಾಣಿಕೆ ದಕ್ಷಿಣ ಕನ್ನಡ‌ ಹಾಗೂ ಬೇರೆ ಜಿಲ್ಲೆಗಳಿಗೆ ಅಪಾಯದ ಮುನ್ಸೂಚನೆಯಾಗಿದೆ.‌ ಈ ಎರಡು ಪಕ್ಷಕ್ಕೆ ನಿಷೇಧಿತ ಪಿಎಫ್ ಐ‌ ಜತೆಗೆ ಅಂತರ್ ಸಂಬಂಧ ಇತ್ತೆಂಬುದು‌ ಜಗಜ್ಜಾಹೀರು. ಮುಂಬರುವ ದಿನಗಳಲ್ಲಿ ಈ ಅಪಾಯಕಾರಿ ಕೂಟ ಹಿಂದು ಕಾರ್ಯಕರ್ತರು ಹಾಗೂ ಸಂಘಟನೆಗಳಿಗೆ ತೊಂದರೆ ನೀಡುವುದು ನಿಶ್ಚಿತವಾಗಿದ್ದು ಸಮಾಜದ ನೆಮ್ಮದಿಗೆ ಕಂಟಕ ಕಾರಿಯಾಗಿ ಪರಿಣಮಿಸಲಿದೆ‌.‌ಇವರಿಬ್ಬರ ಹಿಡನ್ ಅಜೆಂಡಾ ಸಾರ್ವಜನಿಕವಾಗಿ ಬಯಲುಗೊಳಿಸಬೇಕಿದೆ ಎಂದು ಹೇಳಿದ್ದಾರೆ.