ಉಡುಪಿ, ಸೆಪ್ಟೆಂಬರ್ 12: ನಗರದ ಕಡಿಯಾಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿಜಯ ಶೆಟ್ಟಿ(57) ಎಂಬ ವ್ಯಕ್ತಿಯು ಸೆಪ್ಟಂಬರ್ 6 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.
157 ಸೆ.ಮೀ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ
ಎಂದು ಪ್ರಕಟಣೆ ತಿಳಿಸಿದೆ.