ಉಡುಪಿ: ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ, ಈ.ಡಿ, ಸಿ.ಬಿ.ಐ, ಐ.ಟಿ ದುರ್ಬಳಕೆ ಹಾಗೂ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುವ ಷಡ್ಯಂತ್ರದ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆದಿಉಡುಪಿಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು. ಆದಾಯ ತೆರಿಗೆ ಕಚೇರಿಯ ಗೇಟ್ ನ್ನು ಹತ್ತಿ ಒಳನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ ಸದಸ್ಯ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಎಂ ಏ ಗಫೂರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ ರಾಜ್ ಕಾಂಚನ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಶುಭದ್ ರಾವ್, ಗೋಪಿನಾಥ್ ಭಟ್, ಅರವಿಂದ್ ಪೂಜಾರಿ, ಪ್ರದೀಪ್ ಶೆಟ್ಟಿ, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಹರಿಪ್ರಸಾದ್ ಶೆಟ್ಟಿ, ಪಕ್ಷದ ನಾಯಕರಾದ ರಾಜು ಪೂಜಾರಿ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ ಮೊದಲಾದವರು ಇದ್ದರು.












