ಉಡುಪಿ: ಕಾಪು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ 245 ಮತಗಳ ಅಂತರದಿಂದ ವಿಜೇತರಾದ ಅಂಜಾರು 4ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಅನಿಲ್ ಶೆಟ್ಟಿ ಮಾಂಬೆಟ್ಟು ಅವರು ಬಿಜೆಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರಣಂಕಿಲ ಶ್ರೀಶ ನಾಯಕ್ ಅವರು ಅನಿಲ್ ಶೆಟ್ಟಿ ಅವರನ್ನು ಪಕ್ಷದ ಶಾಲು ಹೊದೆಸಿ, ಪೇಟ ತೊಡಿಸಿ ಅಭಿನಂದಿಸಿದರು.
![](https://udupixpress.com/wp-content/uploads/2024/11/IMG_20241126_201706-1024x461.jpg)
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್ ಆತ್ರಾಡಿ, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲೇಶ್ ಶೆಟ್ಟಿ ಬೆಳ್ಳoಪಳ್ಳಿ, ಪ್ರಮುಖರಾದ ಚಂದ್ರಶೇಖರ ಪ್ರಭು, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ಮಡಿವಾಳ್, ಉಪಾಧ್ಯಕ್ಷೆ ಇಂದಿರಾ ಪೂಜಾರ್ತಿ, ಗ್ರಾಮ ಪಂಚಾಯತ್ ಸದಸ್ಯರಾದ ವಸಂತಿ ಪ್ರಭು, ಜಯಶ್ರೀ, ಸಂದೀಪ್ ಕುಮಾರ್, ಗ್ರಾ.ಪಂ. ಮಾಜಿ ಸದಸ್ಯ ಶಿವಾನಂದ ನಾಯಕ್, ನಾಗೇಶ್ ಆಚಾರ್ಯ, ಶೋಧನ್ ಮತ್ತಿತರರು ಉಪಸ್ಥಿತರಿದ್ದರು.