ಉಡುಪಿ: ಉಡುಪಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರಂತಹ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಹೆಸರು ಶಾಶ್ವತವಾಗಿ ಉಳಿವಂತೆ ಮಾಡಲು ಉಡುಪಿಯ ಯಾವುದಾದರೂ ಪ್ರಮುಖ ವೃತ್ತಕ್ಕೆ ಅವರ ಹೆಸರಿಡುವಂತೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾದ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಸೆ.16 ರಂದು ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುರಸ್ಕಾರ – 2024 ಸ್ವೀಕರಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕಿಂತಲೂ ಅಧಿಕ ಕುಟುಂಬಗಳು ಸಹಕಾರ ನೀಡಿದೆ.
ಅವರ ಶ್ರಮಜೀವನ ಎಲ್ಲರಿಗೂ ಮಾದರಿ ಎಂದು ಹೇಳಿದರು.ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅಧ್ಯಕ್ಷತೆ ವಹಿಸಿ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ರಾಯಣ್ಣ ಪ್ರತಿಮೆಗೆ ಕ್ಷೀರಾಭಿಷೇಕ ಮತ್ತು ಪುಷ್ಪಾಚ೯ನೆ ಮೂಲಕ ಉದ್ಘಾಟಿಸಿ ಮಾತನಾಡಿದ ‘ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇ೯ಶಕರಾದ ಪೂಣಿ೯ಮಾ, ರಾಯಣ್ಣ ರಂತಹ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಪ್ರಶಸ್ತಿಯನ್ನು ನೀಡುತ್ತಿರುವುದು ಅಭಿನಂದನೀಯ ಕನ್ನಡ ನಾಡು ನುಡಿ, ಸಂಸ್ಕ್ರತಿಗೆ ನಾವೆಲ್ಲರೂ ಸೇವೆ ಸಲ್ಲಿಸಬೇಕಾಗಿದೆ.
ಕಸಾಪ ಉಡುಪಿ ಘಟಕವು ತನ್ನ ವಿನೂತನ ಅಭಿಯಾನಗಳ ಮೂಲಕ ವಿಶಿಷ್ಠ ಸೇವೆ ಸಲ್ಲಿಸುತ್ತಿದ್ದು, ಎಲ್ಲರಿಗೂ ಮಾದರಿಯಾಗಿದೆ ಎಂದರು.
ನಗರಸಭಾ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ರಾಯಣ್ಣ ಅತ್ಯಂತ ಸಣ್ಣ ವಯಸ್ಸಿನಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ, ಅವರ ಆದಶ೯ಗಳು ನಮ್ಮ ಬದುಕಿನಲ್ಲಿ ರೂಡಿಸಿಕೊಳ್ಳಬೇಕಾಗಿದೆ.ಹಿಂದೂ ಸಂಸ್ಕ್ರತಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಜೀವನ ರೂಡಿಸಬೇಕು ಎಂದರು.
ಸಂಸ್ಕೃತಿ ವಿಶ್ವ ಪ್ರತಿಷ್ಟಾನ ದ ಸ್ಥಾಪಕರಾದ ವಿಶ್ವನಾಥ ಶೆಣ್ಣ ಪುರಸ್ಕಾರ ಪ್ರಧಾನ ಮಾಡಿದರು.ವೇದಿಕೆಯಲ್ಲಿ ಕನ್ನಡ ಪರ ಹೋರಾಟಗಾರ ಪ್ರಭಾಕರ ಪೂಜಾರಿ ಉಪಸ್ಥಿತರಿದ್ದರು.
ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ ಆಶಯ ಭಾಷಣ ಮಾಡಿದರು.ಕಸಾಪ ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು.ವಿ. ಉಮಾಶಂಕರಿ ಪ್ರಾರ್ಥಿಸಿದರು.
ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕರ್ವಾಲು ನಿರೂಪಿಸಿದರು.ಅಭಿಮಾನಿ ಬಳಗದ ಲಕ್ಷ್ಮಣ ಕೋಲ್ಕಾರ್ ವಂದಿಸಿದರು.ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಕಾಯ೯ಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.