ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿ ಜಿಲ್ಲೆಯಾದ್ಯಂತ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜುಲೈ 27 ರ ವರೆಗೆ ಆಯೋಜಿಸಲಾಗಿದೆ.
ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಕೂಡಾ ಈ ಬಾರಿಯೂ ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯಲ್ಲಿರುವ ಜಾನುವಾರುಗಳನ್ನು ಚರ್ಮಗಂಟು ರೋಗದಿಂದ ರಕ್ಷಿಸಬೇಕು. ಈ ಬಗ್ಗೆ ಹೈನುಗಾರರು ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.