ಉಡುಪಿ: ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ: ಶ್ರೀ ಮದ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುಬೇದಾರ್ ಮೇಜರ್ ಗೌರವ ಲೆಫ್ಟಿನೆಂಟ್(ನಿವೃತ್ತ) ಶ್ರೀ ಗಣೇಶ್ ಅಡಿಗ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸಶಸ್ತ್ರ ಪಡೆಗಳ ತ್ಯಾಗ ಮತ್ತು ರಾಷ್ಟ್ರೀಯ ಐಕ್ಯತೆಯ ಮಹತ್ವದ ಬಗ್ಗೆ ತಿಳಿಸಿದರು. ಭಾರತೀಯ ಸೇನೆಯಲ್ಲಿರುವ ವಿವಿಧ ಉದ್ಯೋಗಾವಕಾಶಗಳ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಸಂಸ್ಥೆಯ ಪ್ರಾಂಶುಪಾಲರು ಅವರು ಮಾತನಾಡಿ ದೇಶದ ಬಗ್ಗೆ ಎಲ್ಲರೂ ಅಭಿಮಾನ ಹೊಂದಬೇಕು. ನಮ್ಮ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಬೇಕು ಎಂದರು. ಮೆಕ್ಯಾನಿಕಲ್ ವಿಭಾಗದ ಪ್ರಾಧ್ಯಾಪಕರಾದ ಕಾರ್ತಿಕ್ ಇವರು ಮುಖ್ಯ ಅತಿಥಿಗಳಮ್ಮು ಪರಿಚಯಿಸಿದರು. ವಿದ್ಯಾರ್ಥಿ ಸಾತ್ವಿಕ್ ಎಸ್ ಭಟ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.ಡೀನ್‍ಗಳು, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.