ಉಡುಪಿ: ಜಿಲ್ಲೆಯ ವಿವಿಧ ಭಾಗಗಳಿಗೆ ಪರವಾನಿಗೆ ಹೊಂದಿ ಈಗಾಗಲೇ ಸಂಚರಿಸುತ್ತಿದ್ದ ಖಾಸಗಿ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಸಂಚಾರ ಸ್ಥಗಿತಗೊಳಿಸಿದ್ದಲ್ಲಿ ಅಥವಾ ಟ್ರಿಪ್‌ಗಳನ್ನು ಕಡಿತಗೊಳಿಸಿದ್ದಲ್ಲಿ ಸದರಿ ಬಸ್ಸುಗಳ ನೋಂದಣಿ ಸಂಖ್ಯೆ ಲಭ್ಯವಿದ್ದಲ್ಲಿ, ಸಾರ್ವಜನಿಕರು ನೋಂದಣಿ ಸಂಖ್ಯೆ ಮತ್ತು ಬಸ್ಸಿನ ಹೆಸರು ನಮೂದಿಸಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಲಿಖಿತವಾಗಿ ದೂರನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2575137 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.