ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ದಿನಾಂಕ 20.10.2024ನೇ ಆದಿತ್ಯವಾರದಂದು ಬೆಳಿಗ್ಗೆ 8.30 ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಬೆಳಿಗ್ಗೆ 10.30 ಗಂಟೆಗೆ ಬೃಹತ್ ರಕ್ತದಾನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆ, ನಾಯಕರಾದ ಮುನಿಯಾಲು ಉದಯ್ ಶೆಟ್ಟಿ, ರಮೇಶ್ ಕಾಂಚನ್, ಎಂ ಏ ಗಫೂರ್, ವೆರೋನಿಕಾ ಕರ್ನೇಲಿಯೋ, ಫಾದರ್ ವಿಲಿಯಮ್ ಮಾರ್ಟಿಸ್, ಪ್ರಖ್ಯಾತ್ ಶೆಟ್ಟಿ, ಮಹಾಬಲ ಕುಂದರ್, ಚಂದ್ರಿಕಾ ಶೆಟ್ಟಿ, ಅಣ್ಣಯ್ಯ ಶೇರಿಗಾರ್, ಕೇಶವ್ ಕೋಟ್ಯಾನ್, ಭಾಸ್ಕರ್ ರಾವ್ ಕಿದಿಯೂರು ಹಾಗೂ ಇನ್ನಿತರರ ನೇತೃತ್ವದಲ್ಲಿ ನಡೆಯಿತು.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ಅಲ್ಲಿನ ಅರ್ಥಿಕ ಅಶಕ್ತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಯಪ್ರಕಾಶ್ ಹೆಗ್ಡೆ ಅವರು ಕರೆ ನೀಡಿ . ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಬೃಹತ್ ರಕ್ತದಾನ ಶಿಬಿರದಲ್ಲಿ ಸುಮಾರು 148 ಯೂನಿಟ್ ರಕ್ತ ಸಂಗ್ರಹವಾಯಿತು.
ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಕೃಷ್ಣಮೂರ್ತಿ ಆಚಾರ್ಯ, ಆನಂದ್ ಪೂಜಾರಿ, ಚಂದ್ರಮೋಹನ್, ವಿಜಯ್ ಪೂಜಾರಿ, ಸತೀಶ್ ಪುತ್ರನ್, ಯುವರಾಜ್, ರೋಶನ್ ಶೆಟ್ಟಿ, ಸೌರಭ್ ಬಲ್ಲಾಳ್, ಸಜ್ಜನ್ ಶೆಟ್ಟಿ, ಕುಶಲ್ ಶೆಟ್ಟಿ, ದಿನಾಕರ್ ಹೇರೂರು, ಪ್ರಶಾಂತ್ ಸುವರ್ಣ, ಉದಯ್ ಆಚಾರ್ಯ, ಮಮತಾ ಶೆಟ್ಟಿ, ಕುಸುಮಾ, ವತ್ಸಲಾ, ಸಂಧ್ಯಾ ತಿಲಕ್ರಾಜ್, ಅರ್ಚನಾ, ಭರತ್, ಆಶಾ ಚಂದ್ರಶೇಖರ್, ಶರತ್ ಶೆಟ್ಟಿ, ವಿಶ್ವಾಸ್ ಅಮೀನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಈ ರಕ್ತದಾನ ಶಿಬಿರಕ್ಕೆ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಹಾಗೂ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದ ಎಲ್ಲರಿಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಕಾರ್ಯಕ್ರಮ ಸ್ವಾಗತಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕೊಡವೂರು ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಎಸ್.ಸಿ ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ ಅವರು ವಂದಿಸಿದರು.
ಲಕ್ಷ್ಮಣ್ ಪೂಜಾರಿ, ಹಮ್ಮದ್, ಕಮಲ್ ಸುವರ್ಣ, ವಿಲ್ಸನ್, ಜೋಸ್ಸಿ ಪಿಂಟೋ, ರಾಜೇಶ್ ಶೆಟ್ಟಿ ಕುಂಬ್ರಗೋಡು, ಉದಯ್ ಆಚಾರ್ಯ, ಗುರುಪ್ರಸಾದ್, ಐರಿನ್ ಅಂದ್ರಾದೆ, ರಾಮಪ್ಪ ಸಾಲ್ಯಾನ್, ರಮೇಶ್ ತಿಂಗಳಾಯ, ಜಯವೀರ್ ಫೆಡ್ರಿಕ್ಸ್, ಶಾಲಿನಿ ಸಾಲ್ಯಾನ್, ಸುಕನ್ಯಾ ಪೂಜಾರಿ, ಶಶಿರಾಜ್ ಕುಂದರ್, ಪ್ರದೀಪ್ ಶೇರಿಗಾರ್, ಶೋಭಾ ಬೇಕಲ್, ಸತೀಶ್ ಪೂಜಾರಿ, ಸಾಯಿರಾಜ್ ಉಪಸ್ಥಿತರಿದ್ದರು.