ಉಡುಪಿ: ಯುವಕ ನೇಣು ಬಿಗಿದು ಆತ್ಮಹತ್ಯೆ.

ಉಡುಪಿ: ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಲೆವೂರು ದೆಂದೂರುಕಟ್ಟೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸಂತೋಷ್‌ ಆಚಾರ್ಯ (39). ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾಪು ಠಾಣೆಯ ಎಎಸ್‌ಐ ಗಣೇಶ್‌ ಪೈ ಹಾಗೂ ಶಿವ ನಾಯ್ಕ್ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಕಳೇಬರವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ತಪಾಸಣ ಘಟಕಕ್ಕೆ ರವಾನಿಸುವಲ್ಲಿ ಸಹಕರಿಸಿದರು.