ಉಡುಪಿ: ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಾತಿ – ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣ ಗುರು ವಸತಿ ಶಾಲೆಗಳಲ್ಲಿ 6 ನೇ ತರಗತಿಗೆ
ವಿಶೇಷ ವರ್ಗದ ಮಕ್ಕಳಿಗೆ ಪ್ರವೇಶ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಇಲಾಖೆಯ ವೆಬ್‌ಸೈಟ್ https://cetonline.karnataka.gov.in/kreis24d/Forms/onlineregister.aspx ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಫಾಯಿ ಕರ್ಮಚಾರಿಗಳ ಮಕ್ಕಳು, ಚಿಂದಿ ಆಯುವವರ ಮಕ್ಕಳು, ಸ್ಮಶಾನ ಕಾರ್ಮಿಕರ ಮಕ್ಕಳು, ಬಾಲಕಾರ್ಮಿಕ ಕೆಲಸದಿಂದ ರಕ್ಷಿಸಲ್ಪಟ್ಟ ಮಕ್ಕಳು, ಜೀತದಾಳುಗಳ ಮಕ್ಕಳು, ಮಾಜಿ ದೇವದಾಸಿಯರ ಮಕ್ಕಳು, ಶೇ. 25 ಕ್ಕಿಂತ ಹೆಚ್ಚು ಅಂಗವೈಕಲ್ಯ ಹೊಂದಿದ ಮಕ್ಕಳು, ಎಚ್.ಐ.ವಿ ಪೀಡಿತ ಪಾಲಕರ ಮಕ್ಕಳು, ಒಂಟಿ ತಾಯಂದಿರ ಮಕ್ಕಳು, ಅನಾಥ ಮಕ್ಕಳು, ಅಲೆಮಾರಿ ಸಮುದಾಯದ ಮಕ್ಕಳು, ಸರ್ಕಾರಿ ಯೋಜನೆಗಳಿಂದ ಸ್ಥಳಾಂತರಗೊಂಡ ಮಕ್ಕಳು, ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತಗೊಂಡ ಸೇನಾ ಸಿಬ್ಬಂದಿ ಮಕ್ಕಳು ಹಾಗೂ ಗಿರಿಜನ ವಸತಿ ಶಾಲೆಗಳಲ್ಲಿ 5ನೇ ತರಗತಿಯವರೆಗೆ ಓದಿದ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಅಥವಾ ಆಶ್ರಯ ಶಾಲೆಯ ವಿದ್ಯಾರ್ಥಿಗಳು ದಾಖಲಾತಿಯೊಂದಿಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಮನ್ವಯಾಧಿಕಾರಿಗಳು, ಉಡುಪಿ ಮೊ.ನಂ: 9482625925 ಅಥವಾ ಹಿರೇಬೆಟ್ಟು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಮೊ.ನಂ: 7975115073 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.