ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ; ಪುತ್ತಿಗೆ ಶ್ರೀಗಳಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಸ್ವೀಕಾರ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.

ಬಳಿಕ ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಹಾಗೂ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಉಪಸ್ಥಿತರಿದ್ದರು.