ಉಡುಪಿ ಶ್ರೇಷ್ಠ ಕೃಷಿಕ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು
ಮಟ್ಟದಲ್ಲಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ, ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಕೃಷಿ ಚಟುವಟಿಕೆಗಳನ್ನು ಕೈಗೊಂಡಿರುವ ಹಾಗೂ ಕನಿಷ್ಠ ಒಂದು ಎಕರೆ ವಿಸ್ತೀರ್ಣ ಸ್ವಂತ ಜಮೀನು ಹೊಂದಿರುವ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.