ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 4ನೇ ಮತ್ತು 7ನೇ ತರಗತಿಯಲ್ಲಿ ತೇರ್ಗಡೆಯಾದ ಹಾಗೂ ಕ್ರಮವಾಗಿ ಪ್ರಸ್ತುತ ಶೈಕ್ಷಣಿಕ ಸಾಲಿನ 1ನೇ ಜೂನ್ ಗೆ 11 ಮತ್ತು
14 ವರ್ಷ ಮೀರದ ಬಾಲಕರಿಗೆ ಇಲಾಖೆಯ ವತಿಯಿಂದ ನಡೆಯುತ್ತಿರುವ ಕಾರವಾರ ಕ್ರೀಡಾ ವಸತಿ ನಿಲಯ ಪ್ರವೇಶಾತಿಗೆ ಜಲಸಾಹಸ ಕ್ರೀಡಾ ವಿಭಾಗಗಳ (ಸೇಲಿಂಗ್, ಕಯಾಕಿಂಗ್, ಕನೂಯಿಂಗ್) ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯು ಏಪ್ರಿಲ್ 3 ರಂದು ಬೆಳಗ್ಗೆ 10 ರಿಂದ ನಗರದ ಅಜ್ಜರಕಾಡು ಮಹಾತ್ಮಾಗಾಂದಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸಕ್ತರು ನಿಗದಿಪಡಿಸಿದ ನಮೂನೆಯಲ್ಲಿ ವೈದ್ಯಕೀಯ ಪ್ರಮಾಣಪತ್ರ ಹಾಗೂ ದೃಢೀಕರಿಸಿದ ಜನನ ದಿನಾಂಕ ಪ್ರಮಾಣಪತ್ರದೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಬಹುದಾಗಿದೆ.
ಆಯ್ಕೆಗೊಂಡ ಕ್ರೀಡಾಪಟುಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರದೊಂದಿಗೆ ವಿಶೇಷ ಕ್ರೀಡಾ ತರಬೇತಿ – ಇತ್ಯಾದಿ ಇಲಾಖಾ ವತಿಯಿಂದ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ದೂರವಾಣಿ ಸಂಖ್ಯೆ : 0820-2521324, ಮೊ.ನಂ: 9845432303 ಅನ್ನು ಕಚೇರಿ
ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.












