ಉಡುಪಿ: ಕಾಶ್ಮೀರದ ಪಹಲ್‌ಗಾಮದಲ್ಲಿ ಉಗ್ರರ ದಾಳಿಗೆ ಕನ್ನಡಿಗರಿಬ್ಬರು ಬಲಿಯಾಗಿರುವುದು ವಿಷಾದನೀಯ
ಸಂಗತಿಯಾಗಿದೆ. ಆದ್ದರಿಂದ ಜಮ್ಮು ಕಾಶ್ಮೀರದ ಪ್ರವಾಸಕ್ಕೆ ತೆರಳಿರುವ ಕನ್ನಡಿಗರನ್ನು ರಾಜ್ಯಕ್ಕೆ ಮರಳಿ ತರಲು ರಾಜ್ಯ ಸರ್ಕಾರ ಪ್ರಯತ್ನಸುತ್ತಿದೆ.
ಕರ್ನಾಟಕದಲ್ಲಿ ಪ್ರವಾಸ ನಿರ್ವಹಿಸುತ್ತಿರುವ ಪ್ರವಾಸಿ ಕಾರ್ಯಾಚರಣೆದಾರರು (ಟೂರ್ ಆಪರೇರ‍್ಸ್ ಮತ್ತು ಟ್ರಾವೆಲ್ ಏಜೆಂಟ್ಸ್) ತಮ್ಮ ಮೂಲಕ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿರುವ ಪ್ರಯಾಣಿಕರ ವಿವರಗಳನ್ನು ಹಾಗೂ ಪ್ರವಾಸಿಗರ ಸಂಬಂಧಿಕರು ಅಥವಾ ಪರಿಚಯಸ್ಥರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ಸಹಾಯವಾಣಿ ಸಂಖ್ಯೆ: 080-43344334, 080-43344335, 080- 43344336 ಹಾಗೂ 080-43344342 ಗೆ ನೀಡುವಂತೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.












