ಉಡುಪಿ: ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30 ನೇ ಸಾಲಿನ 5 ವರ್ಷಗಳ ಅವಧಿಗೆ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಆಯ್ಕೆಯ ಚುನಾವಣೆಯು ಜನವರಿ 13 ರಂದು ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗಿದ್ದು, ಸದರಿ ಕೃಷಿಕ ಸಮಾಜದ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಕೊಡ್ಗಿ, ಉಪಾಧ್ಯಕ್ಷರಾಗಿ ನವೀನಚಂದ್ರ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ ವೆಂಕಟೇಶ್, ಖಜಾಂಜಿಯಾಗಿ ಹೆಚ್.ಕೆ ಸುಧಾಕರ ಹಾಗೂ ರಾಜ್ಯ ಪ್ರತಿನಿಧಿಯಾಗಿ ಪ್ರದೀಪ ಹೆಬ್ಬಾರ್ ಕೆ ಅವರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.