ಉಡುಪಿ:ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನ : ಅರ್ಜಿ ಆಹ್ವಾನ

ಉಡುಪಿ: ಹಿಂದುಳಿದ ವರ್ಗಗಳ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ. ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ
ವೆಬ್‌ಸೈಟ್ https://bcwd.karnataka.gov.in/ ಸಹಾಯವಾಣಿ ಸಂಖ್ಯೆ: 8050770004
ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.