ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 2024-25 ನೇ ಸಾಲಿನಲ್ಲಿ 5
ನೇ ತರಗತಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ 6 ನೇ ತರಗತಿಗೆ ಸೇರ್ಪಡೆಗೆ ಅರ್ಜಿ
ಆಹ್ವಾನಿಸಲಾಗಿದೆ.
5 ನೇ ತರಗತಿಯಲ್ಲಿ ಶೇ. 60 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ, ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ.ಒಳಗಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಮೇ 3 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಠಡಿ ಸಂಖ್ಯೆ: 310, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.












