ಉಡುಪಿ: ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರತ್ನ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.