ಉಡುಪಿ: ಕ್ಷುಲಕ ಕಾರಣಕ್ಕೆ ಉತ್ತರ ಭಾರತದ ಕಾರ್ಮಿಕರು ದೊಣ್ಣೆ, ಕೈಗಳಿಂದ ಹೊಡೆದಾಡಿಕೊಂಡ ಘಟನೆ ಉಡುಪಿ ನಗರದಲ್ಲಿ ನಡೆದಿದೆ.
ಕಾರ್ಮಿಕರ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಸಿಕ್ಕ ಸಿಕ್ಕ ವಸ್ತುಗಳಲ್ಲಿ ಹಲ್ಲೆ ನಡೆಸಿ ಹೊಡೆದಾಡಿಕೊಂಡಿದ್ದಾರೆ. ಕೆಲಸದ ನಿಮಿತ್ತ ಉಡುಪಿಗೆ ಆಗಮಿಸಿದ್ದ ಕಾರ್ಮಿಕರು, ಕೆಲಸ ಮುಗಿಸಿಕೊಂಡು ಹೋದ ಮೇಲೆ ರಾತ್ರಿ ಹೊತ್ತು ಗಲಾಟೆ ಮಾಡಿಕೊಂಡಿದ್ದಾರೆ. ಇದೀಗ ಕಾರ್ಮಿಕರ ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.