ಎಸ್.ಎಸ್.ಎಲ್.ಸಿ ಪರೀಕ್ಷೆ-2: ನಿಷೇಧಾಜ್ಞೆ ಜಾರಿ

ಉಡುಪಿ: 2024 ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಯು ಜಿಲ್ಲೆಯ ಒಟ್ಟು 5 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 14 ರಿಂದ 22 ರ ವರೆಗೆ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.