ಕಲಾವಿದರಿಗೆ ಗುರುತಿನ ಚೀಟಿ: ಅರ್ಜಿ ಅಹ್ವಾನ.

ಉಡುಪಿ: ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯಲ್ಲಿನ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದಾಗಿದ್ದು, ಅರ್ಜಿಯಲ್ಲಿ ಸ್ವ-ವಿವರದ ಮಾಹಿತಿಯೊಂದಿಗೆ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪ ಚಿತ್ರಕಲೆಗಳ ಕಲಾ ಪ್ರದರ್ಶನಗಳು ಹಾಗೂ ಛಾಯಾಚಿತ್ರಗಳನ್ನು ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 27 ರ ಒಳಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಡಾ. ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿನಗರ, ಅಲೆವೂರು ಗ್ರಾಮ, ಮಣಿಪಾಲ ಅಂಚೆ, ಉಡುಪಿ ದೂ.ಸಂಖ್ಯೆ: 0820-2986168 ಇಲ್ಲಿಗೆ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.