ಕಾಪು: ರಾಷ್ಟ್ರೀಯ ಹೆದ್ದಾರಿ 66, ಕೊಪ್ಪಲಂಗಡಿ ಸಮೀಪ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಅ.12ರಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಶಂಶುದ್ದೀನ್ ಮಹಮ್ಮದ್ ಆಲಿ ಸಾಹೇಬ್ ಎಂದು ಗುರುತಿಸಲಾಗಿದೆ.
ಇವರು ಡಿವೈಡರನ್ನು ದಾಟಿ ಮಲ್ಲಾರು ಕೋಟೆ ರಸ್ತೆ ಕಡೆಗೆ ಹೋಗಲು ರಸ್ತೆಯ ಅಂಚಿನಲ್ಲಿ ನಿಂತುಕೊಂಡಿರುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪಿಕ್‌ಅಪ್ ವಾಹನ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.