ಕಾರ್ಕಳ ಅತ್ಯಾಚಾರ ಪ್ರಕರಣ: ಅಮಾಯಕ ದಲಿತ ಯುವತಿ ಮೇಲೆ ನಡೆದ ಅಮಾನುಷ ಕೃತ್ಯ ಖಂಡನೀಯ: ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಅಮಾಯಕ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಅಮಾನುಷ ಕೃತ್ಯವನ್ನು ಬಿಜೆಪಿ ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ ಬಾಬು ಖಂಡಿಸಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲಿಯೇ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಾದಕ ವಸ್ತುಗಳು ಸರಬರಾಜು ಆಗುತಿರುವ ಕುರಿತು ಪೊಲೀಸ್ ಇಲಾಖೆಗೆ ಮಾಹಿತಿ ಇದ್ದರು ಕೂಡ ಯಾವುದೇ ಕ್ರಮ ವಹಿಸದೇ ಇರುವುದರಿಂದ ಇಂಥಹ ಘಟನೆಗಳು ಆಗುತಿದೆ ಎಂದು ತಿಳಿಸಿದರು. ಪ್ರಸ್ತುತ ದಲಿತ ಸಂಘಟನೆಗಳೂ ಸೇರಿದಂತೆ ಎಲ್ಲ ಸಮುದಾಯದವರು ಘಟನೆಯನ್ನು ಖಂಡಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.