ಉಡುಪಿ: ಜಿಲ್ಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿದ್ದ ಮತಾಂಧ ಶಕ್ತಿಗಳೇ ಇಂತಹ ಹೇಯ ಕೃತ್ಯಕ್ಕೆ ಪರೋಕ್ಷ ಬೆಂಬಲ ನೀಡುತ್ತಿದೆ. ಈಗಾಗಲೇ ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಉಳಿದ ಆರೋಪಿಗಳನ್ನು ತಕ್ಷಣ ಬಂಧಿಸಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಾಣದ ಕೈಗಳನ್ನು ಹುಡುಕಿ ಹೆಡೆಮುರಿ ಕಟ್ಟುವ ಕೆಲಸಕ್ಕೆ ಪೊಲೀಸ್ ಇಲಾಖೆ ಮುಂದಾಗಲಿ ತಪ್ಪಿದಲ್ಲಿ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕರಾವಳಿ ಜಿಲ್ಲೆಯಲ್ಲಿ ಮಾದಕ ದ್ರವ್ಯ ಜಾಲ, ಕೊಲೆ, ಸುಲಿಗೆ , ಅತ್ಯಾಚಾರ ಪ್ರಕರಣದಿಂದ ಜನಸಾಮಾನ್ಯರು ಆತಂಕಕ್ಕೊಳಗಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಮತೀಯ ಶಕ್ತಿಗಳ ಓಲೈಕೆಯಿಂದ ಲವ್ ಜೆಹಾದ್ ಭಾಗವಾಗಿ ಹಿಂದೂ ಹುಡುಗಿಯರ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ರಾಜ್ಯ ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.