ಉಡುಪಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ
ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್ಸೈಟ್
https://karnemakaone.kar.nic.in/abcd/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಕುಂದಾಪುರ ತಾಲೂಕು ಪಂಚಾಯತ್ ಹತ್ತಿರದ ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.