ಕುಂದಾಪುರ: ನವದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಕಲೋತ್ಸವ ಸ್ಪರ್ಧೆಗೆ ಹೆಮ್ಮಾಡಿ ಜನತಾ ಕಾಲೇಜಿನ ಕೇದಾರ ಮರವಂತೆ ಆಯ್ಕೆ.

ಕುಂದಾಪುರ: ಕೇಂದ್ರ ಸರಕಾರದ ಶಿಕ್ಷಣ ಇಲಾಖೆಯ ಮಾಧ್ಯಮಿಕ ಶಿಕ್ಷಣ ವಿಭಾಗವು ಮಾಧ್ಯಮಿಕ ಹಂತದ ಶಿಕ್ಷಣದಲ್ಲಿ ಕಲಾ ಮತ್ತು ಸಾಂಸ್ಕೃತಿಕ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನಡೆಸುವ ರಾಷ್ಟ್ರ ಮಟ್ಟದ ಕಲಾ ಉತ್ಸವದಲ್ಲಿ ಭಾಗವಹಿಸಲು ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ ಮರವಂತೆ ಆಯ್ಕೆಯಾಗಿದ್ದು, ಶಾಸ್ತ್ರೀಯ ಗಾಯನ ವಿಭಾಗದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

ಕೇದಾರ ಅವರು ಹಿಂದೂಸ್ತಾನಿ ಶಾಸ್ತ್ರೀಯ ಗಾಯನದ ಗ್ವಾಲಿಯರ್ – ಪಾಟಿಯಾಲ – ಕಿರಾಣಾ ಘರಾಣೆಯ ಗಾಯಕ, ಗೋಪಾಡಿಯಲ್ಲಿ ನೆಲಸಿರುವ ವಿದ್ವಾನ್ ಸತೀಶ್ ಭಟ್ ಮಾಳಕೊಪ್ಪ ಅವರ ಶಿಷ್ಯ. ಮರವಂತೆಯ ಜತೀಂದ್ರ – ರೂಪಶ್ರೀ ದಂಪತಿಯ ಪುತ್ರ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.