ಕುಂದಾಪುರ: ಬೀಜಾಡಿಯಲ್ಲಿ ಸಮುದ್ರಪಾಲಾಗಿದ್ದ ತುಮಕೂರು ತಿಪಟೂರು ಮೂಲದ ಟಿ.ಆರ್.ಯೋಗೀಶ್(23) ಎಂಬ ಯುವಕನ ಮೃತದೇಹವು ಇಂದು ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.
ಜೂ.20ರಂದು ನಡೆಯಲಿದ್ದ ವಿವಾಹ ಕಾರ್ಯಕ್ರಮಕ್ಕೆ ಸ್ನೇಹಿತನ ಆಮಂತ್ರಣದಂತೆ ಯೋಗೀಶ್ ಹಾಗೂ ಸಂದೀಪ್ ಎಂಬವರು ತಿಪಟೂರಿನಿಂದ ಬೈಕಿನಲ್ಲಿ ಬೀಜಾಡಿಗೆ ಜೂ.19ರಂದು ಆಗಮಿಸಿದ್ದರು. ಸಂಜೆ ವೇಳೆ ಸಮುದ್ರದ ಬಳಿ ತೆರಳಿದ್ದ ಇವರು ನೀರಿಗಿಳಿದು ಆಡುತ್ತಿದ್ದರು.
ಈ ವೇಳೆ ಇವರಿಬ್ಬರು ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿಕೊಂಡು ಹೋದರು. ಇವರಲ್ಲಿ ಸಂದೀಪ್ ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದರು. ಆದರೆ ಯೋಗೀಶ್ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಆತನ ಸ್ನೇಹಿತನನ್ನು ಸ್ಥಳೀಯರು ಬಚಾವ್ ಮಾಡಿದ್ದರು. ಯೋಗೀಶ್ ಐಟಿಐ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.












