ಕುಂದಾಪುರ : ಅಕ್ಟೋಬರ್ 17 ರಿಂದ 19 ರ ತನಕ ಆಂಧ್ರ ಪ್ರದೇಶದ ಗುಂಟೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ 35ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಬೆಳ್ಳಿ ಪದಕ ಪಡೆದು ಅಪೂರ್ವ ಸಾಧನೆಗೆ ಸಾಕ್ಷಿಯಾಗಿದ್ದಾನೆ.
ವಿದ್ಯಾರ್ಥಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.