ಕೋಟ: ಕೌಟುಂಬಿಕ ಕಲಹ; ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಪತಿ

ಉಡುಪಿ: ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ.

ಜಯಶ್ರೀ (28) ಕೊಲೆಯಾದ ಪತ್ನಿ, ಕಿರಣ್ ಉಪಾಧ್ಯ (30) ಪತಿ ಕೊಲೆ ಆರೋಪಿ.

ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ಜೋಡಿ ವಾಸವಾಗಿದ್ದರು ಎನ್ನಲಾಗಿದೆ. ಜೋಡಿಗೆ ಒಂಭತ್ತು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯ ಕುರಿತು ಕೋಟ ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.