ಗೋಬಿ, ಕಬಾಬ್ ಇದೀಗ ಪಾನಿಪುರಿಯಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ..!

ಬೆಂಗಳೂರು: ಗೋಬಿ, ಕಬಾಬ್ ಬೆನ್ನಲ್ಲೆ ಇದೀಗ ಪಾನಿಪುರಿಗೆ ಬಳಸೋ ಸಾಸ್, ಮೀಟಾ ಖಾರದ ಪುಡಿಯಲ್ಲಿ ಐದು ಬಗೆಯ ರಾಸಾಯನಿಕ ಅಂಶ ಪತ್ತೆಯಾಗಿದೆ. ಈ ಮೂಲಕ ಪಾನಿಪುರಿ ಪ್ರಿಯರಿಗೆ ಬಿಗ್ ಶಾಕ್ ಕೊಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಯಾರಿ ಮಾಡಿದೆ.

ಈ ಹಿನ್ನಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ರಾಜ್ಯದ ನಾನಾ ಭಾಗದಲ್ಲಿ ಪಾನಿಪುರಿ ಮಾದರಿಗಳನ್ನ ಸಂಗ್ರಹ ಮಾಡಿ ಪರೀಕ್ಷಿಸಿದೆ. ಅದ್ರಲ್ಲಿ ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪೂರಿ ತಯಾರಿಕೆ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಇರೋದು ಪತ್ತೆಯಾಗಿದ್ದು ತಿಳಿದುಬಂದಿದೆ.

ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸೋ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ನಿರ್ಧಾರಿಸಲಾಗಿದೆ.