ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ: ಸಂತೆ, ಜಾತ್ರೆ ನಿಷೇದ

ಉಡುಪಿ: 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗಲಿರುವ ಜಿಲ್ಲೆಯ ಕುಂದಾಪುರ ತಾಲೂಕಿನ 45-ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಸಂಬಂಧಿಸಿದಂತೆ ಡಿಸೆಂಬರ್ 8 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆ ಶಾಂತಿ ಮತ್ತು ಸುವ್ಯಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮತ್ತು ಸಾರ್ವಜನಿಕರಿಗೆ ಮತ ಹಾಕಲು ಅನುಕೂಲವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಚುನಾವಣೆ ನಡೆಯುವ ದಿನದಂದು ಈ ಮೇಲ್ಕಂಡ ಗ್ರಾಮ ಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯಲ್ಲಿ ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.