ಬೆಂಗಳೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ವಿರುದ್ಧ 3,991 ಪುಟಗಳ ಆರೋಪ ಪಟ್ಟಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿರುವ ವರದಿಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಅದನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚಿಸಿದೆ. ಮುಂದಿನ ವಿಚಾರಣೆಯವರೆಗೂ ನಿರ್ಬಂಧ ಜಾರಿಯಲ್ಲಿರುತ್ತದೆ.
ಚಾರ್ಜ್ ಶೀಟ್ ನಲ್ಲಿರುವ ವರದಿಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಬಂದಿವೆ.
ನ್ಯಾಯಾಲಯವು ಈ ತೀರ್ಪಿನ ಬಗ್ಗೆ ಮಾಧ್ಯಮ ಸಂಸ್ಥೆಗಳಿಗೆ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೂ ಸೂಚಿಸಿದೆ.