ಜೂ.13ರವರೆಗೆ ಉಡುಪಿ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರೀ ಮಳೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಉಡುಪಿ ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಜೂನ್ 13ರವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ವಿಜಯಪುರ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಜೂನ್ 13ರ ವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಜೂನ್ 14ರವರೆಗೆ ಸಾಧಾರಣ ಮಳೆ ಮುಂದುವರಿಯಲಿದೆ.
ಸಿಯರ್ಝೋನ್ 17 ಡಿಗ್ರಿ ಉತ್ತರ ಅಕ್ಷಾಂಶದಲ್ಲಿ ಉತ್ತರ ಕರ್ನಾಟಕದ ಭಾಗದಲ್ಲಿದ್ದು 3.1 ಹಾಗೂ 5.8 ಕಿ.ಮೀ ಎತ್ತರದಲ್ಲಿ ಇದೆ. ಪರಿಣಾಮ ಕರಾವಳಿಯಲ್ಲಿ ಜೂನ್ 12 ರಿಂದ 14ರ ವರೆಗೆ ವ್ಯಾಪಕವಾಗಿ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.