ಉಡುಪಿ: ರಾಜ್ಯ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿರುವ ನಗರದ ಉಪ್ಪೂರಿನ ಕೊಳಲಗಿರಿಯ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಹಾಗೂ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ನಲ್ಲಿ ಬಾಕಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ
ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರುವ ವಿದ್ಯಾರ್ಥಿಗಳು ವಿವಿಧ ಕೋರ್ಸ್ಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಜಿ.ಟಿ.ಟಿ.ಸಿ ಕೇಂದ್ರದಲ್ಲಿ 3+1 ವರ್ಷದ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ಮತ್ತು ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನುಪ್ಯಾಕ್ಚರಿಂಗ್ ಕೋರ್ಸ್ ಗಳಿಗೆ
ತಲಾ ೬೦ ವಿದ್ಯಾರ್ಥಿಗಳಿಗೆ ಸೀಟು ಲಭ್ಯವಿದೆ. ಹೊರ ಜಿಲ್ಲೆ ಹಾಗೂ ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಸ್ಟೆಲ್
ವ್ಯವಸ್ಥೆಯೊಂದಿಗೆ ಆತ್ಯಾಧುನಿಕ ಉಪಕರಣಗಳನ್ನು
ಹೊಂದಿರುವ ಕಂಪ್ಯೂಟರೈಸ್ಡ್ ಲ್ಯಾಬ್ ಕೂಡ ಇದ್ದು, ಮೂರು ವರ್ಷದ ಕೋರ್ಸ್ ಮುಗಿಯುತ್ತಿದ್ದಂತೆ ೧ ವರ್ಷ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಇಂಟರ್ನಶಿಪ್ ಇರಲಿದೆ. ಆಗ ಶಿಷ್ಯವೇತನವನ್ನು ನೀಡಲಾಗುವುದು.
ಐ.ಟಿ.ಐ ಮತ್ತು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ನೇರವಾಗಿ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ, ಕೊಳಲಗಿರಿ, ಉಪ್ಪೂರು, ಉಡುಪಿ ಮೊ.ನಂ: 9880510585 ಅಥವಾ ಮೊ.ನಂ:
8618760169 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.