ಮಂಗಳೂರು:ದ.ಕ.ಜಿಲ್ಲೆಯಲ್ಲಿ ಎರಡು ಹೊಸ ಸೇತುವೆ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾ ಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಮಂಗಳೂರು-ಚೆರ್ವತ್ತೂರು ಜಿಲ್ಲಾ ಮುಖ್ಯರಸ್ತೆಯ (ಕೋಟೆಪುರದಿಂದ ಬೋಳಾರದವರೆಗೆ) ನೇತ್ರಾವತಿ ನದಿಗೆ ಅಡ್ಡಲಾಗಿ 200 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುವುದು. ಅದಲ್ಲದೆ ಬಂಟ್ವಾಳ ತಾಲೂಕಿನ ಸಜಿಪ ನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ 60 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.