ದೀಕ್ಷಾಭೂಮಿ ಯಾತ್ರೆಗೆ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ : ಅರ್ಜಿ ಆಹ್ವಾನ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್ ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟçದ ನಾಗಪುರದಲ್ಲಿನ ದೀಕ್ಷಾಭೂಮಿ ಯಾತ್ರೆಗೆ ನಿಯೋಜಿಸಲು ಅರ್ಹ ಆಸಕ್ತ 18 ವರ್ಷ
ಮೇಲ್ಪಟ್ಟ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್
https://swdservices.karnataka.gov.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.