ನಾಗಮಂಗಲ: ಸಕಲೇಶಪುರ ಶಾಸಕರು ಮತ್ತು ಎಸ್ ಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಸಿಮೆಂಟ್ ಮಂಜುರವರು, ರಾಜ್ಯ ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾದ ದಿನಕರ್ ಬಾಬುರವರು, ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ್ ರವರು ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಗಣೇಶೋತ್ಸವದ ಆಯೋಜಕರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಇಂದ್ರೇಶ್ ಕುಮಾರ್, ಪ್ರಶಾಂತ್ ಕಛೇರಿ ಕಾರ್ಯದರ್ಶಿ, ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಶಂಕರ್, ಪ್ರಧಾನ ಕಾರ್ಯದರ್ಶಿ ಧರಣೇಂದ್ರ, ಸೋಮಶೇಖರ್, ತೊಳಲಿ ಕೃಷ್ಣಮೂರ್ತಿ ಸೇರಿದಂತೆ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.