ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ

ಉಡುಪಿ: ಪ್ರತಿಭಾವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮೋಸ ಮಾಡುತ್ತಿದೆ. ಇದರ ನೇರ ಹೊಣೆ ಹೊತ್ತು ಸಮಾಜ ಕಲ್ಯಾಣ ಸಚಿವರು ರಾಜೀನಾಮೆ ನೀಡಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಪಕ್ಷ ಮತ್ತು ದಲಿತ ಸಂಘರ್ಷ ಸಮಿತಿ ಭೀಮವಾದ ಒತ್ತಾಯ ಮಾಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಸಂಸದ ಶೇಖರ ಹಾವಂಜೆ , ಸಿದ್ದರಾಮಯ್ಯ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿರುವ ಡಾ. ಹೆಚ್.ಸಿ. ಮಹದೇವಪ್ಪ ಎಸ್.ಸಿ./ ಎಸ್.ಟಿ ಸಮುದಾಯದ ವಿದ್ಯಾರ್ಥಿಗಳ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್.ಸಿ./ ಎಸ್.ಟಿ. ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರ ಅಲ್ಪ ಪ್ರಮಾಣದಲ್ಲಿ ಪ್ರೋತ್ಸಾಹಧನವನ್ನು ನೀಡುತ್ತಾ ಬಂದಿತ್ತು. ಇದನ್ನು ಇನ್ನೂ ಹೆಚ್ಚು ಮಾಡಬೇಕಾಗಿತ್ತು. ಆದರೆ ಯಾವುದೇ ಕಾರಣವನ್ನೂ ನೀಡದೇ ಪ್ರೋತ್ಸಾಹ ಧನವನ್ನು ತಡೆಹಿಡಿದಿರುವುದು ಖಂಡನೀಯ ಹಾಗೂ ಇದಕ್ಕೆ ಹಾಕಿರುವ ಮಾನದಂಡ ಅವೈಜ್ಞಾನಿಕವಾದುದು ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದುದು. ಇದರ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.