ಬಂಟಕಲ್ ಕಾಲೇಜಿನಲ್ಲಿ “ ರಾಷ್ಟ್ರ ಮಟ್ಟದ 36 ಗಂಟೆಗಳ ಹ್ಯಾಕೋತ್ಸವ” ಉದ್ಘಾಟನೆ

ಬಂಟಕಲ್:ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಗಣಕಯಂತ್ರ ವಿಭಾಗವು ಸಂಸ್ಥೆಯ ಇನ್ನೋವೇಶನ್ ಘಟಕ, ಐಎಸ್‌ಟಿಇ ಘಟಕ ಮತ್ತು ಐಇಇಇ ವಿದ್ಯಾರ್ಥಿ ಘಟಕದ ಸಹಯೋಗದೊಂದಿಗೆ ರಾಷ್ಟ್ರ
ಮಟ್ಟದ 36 ಗಂಟೆಗಳ ಹ್ಯಾಕೋತ್ಸವದ ಉದ್ಘಾಟನಾ ಸಮಾರಂಭವು ದಿನಾಂಕ 11 ಸೆಪ್ಟೆಂಬರ್ 2024 ರಂದು ನಡೆಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇರ‍್ವ ಭಟ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಇವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ
ತಾಂತ್ರಿಕ ಕೌಶಲ್ಯವನ್ನು ಅಭಿವೃದ್ಧಿ ಪಡಿಸಿ ಉದ್ಯೋಗವಕಾಶವನ್ನು ಪಡೆದುಕೊಳ್ಳಲು ನೆರವಾಗುತ್ತದೆ ಎಂದರು.

ಸಂಸ್ಥೆಯ ಉಪ ಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಗಣಕಯಂತ್ರ ವಿಭಾಗದ ಪ್ರಾಧ್ಯಾಪರಾದ ಶ್ರೀ ದೀಪಕ್ ರಾವ್ ಸ್ವಾಗತಿಸಿ ಸ್ಪರ್ಧೆಯ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ವಿದ್ಯಾರ್ಥಿಗಳಾದ ಅಭಿಷೇಕ್ ಕಿಣಿ ಪ್ರಾರ್ಥಿಸಿ, ಅಧಿತಿ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಗಣಕ ಯಂತ್ರ ವಿಭಾಗದ ಮುಖ್ಯಸ್ಥರಾದ ಸೌಮ್ಯಾ ಭಟ್ ವಂದಿಸಿದರು.

ದಿನಾಂಕ 11-13 ಸೆಪ್ಟೆಂಬರ್ 2024 ರವರೆಗೆ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾರತದ ವಿವಿಧ ರಾಜ್ಯಗಳ ಪ್ರತಿಷ್ಠಿತ ಇಂಜಿನಿಯರಿಂಗ್
ಕಾಲೇಜಿನ ಒಟ್ಟು 40 ವಿದ್ಯಾರ್ಥಿಗಳ ತಂಡವು ಭಾಗವಹಿಸಲಿದ್ದು, ವಿಜೇತ ತಂಡಕ್ಕೆ ತಲಾ ಒಂದು ಲಕ್ಷ ರೂಪಾಯಿ ನಗದು ಬಹುಮಾನವನ್ನು ನೀಡಲಾಗುತ್ತದೆ.