ಬಂಟ್ವಾಳ: ಭೀಕರ ರಸ್ತೆ ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರ ಗಾಯಗೊಂಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.
ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಘಟನೆಯಲ್ಲಿ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದು, ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಸೆ. 5ರಂದು ಇವರ ವಿವಾಹ ನಡೆದಿತ್ತು.