ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನು ಒಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ವ್ಯಕ್ತಿ/ಸಂಸ್ಥೆಗಳು ಫೆ.3ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗೆ ಮಂಗಳೂರು ಬಿಜೈ ಮೆಸ್ಕಾಂ ಬಳಿಯ, ಜಿಲ್ಲಾ ಸ್ತ್ರೀ ಶಕ್ತಿ ಭವನ 2ನೇ ಮಹಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.












