ಮಣಿಪಾಲ, ಆ.11: ಮಣಿಪಾಲದಲ್ಲಿ ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಉಳ್ತೂರು ಗ್ರಾಮದ ಉದಯ(43) ಎಂದು ಗುರುತಿಸಲಾಗಿದೆ. ಇವರು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.