ಮಣಿಪಾಲ: ಪರ್ಕಳ ಹೆರ್ಗಾ ಗ್ರಾಮದಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.5ರಂದು ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ.
ಮಹೇಶ್ ತನಗಿರುವ ಡಯಾಲಿಸ್ ಬಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅದಕ್ಕಾಗಿ ಹೆರ್ಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದರು.
ಮಂಗಳೂರಿನ ಕಾಲೇಜೊಂದರಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












