ಮಾನಹಾನಿ ಪದ ಬಳಕೆ ಆರೋಪ: ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ಬಂಧನ.

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ಗುರುವಾದಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಈಗ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ ವಿರುದ್ಧ ಎಫ್​​​​​​​ಐಆರ್​ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ ಈಗ ಸಿಟಿ ರವಿ ಅವರನ್ನು ಬೆಳಗಾವಿಯಲ್ಲಿನ ಸುವರ್ಣ ಸೌಧದಲ್ಲಿ ಪೊಲೀಸರು ಬಂಧಿಸಿದ್ದಾರೆ.ತಮ್ಮ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಈಗ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸಿಟಿ.ರವಿ ತಮ್ಮ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಆದ್ದರಿಂದ ಇದರ ಆಡಿಯೋ ಪರಿಶೀಲಿಸಬೇಕೆಂದು ಸಚಿವ ಲಕ್ಷ್ಮಿ ಹೆಬ್ಬಾಳಕರ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದರು. ಇದಾದ ಬಳಿಕ ಅವರು ಆಡಿಯೋ ಪರಿಶೀಲನೆ ಸೂಚನೆ ನೀಡಿದ್ದಾರೆ.