ಉಡುಪಿ: ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮೇಘರಾಜ್ ಎಂಬುವವರ ಮನೆಯಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಬೃಹತ್ ಕಾಳಿಂಗ ಸಂರ್ಪವನ್ನು ನೋಡಿದ ಗ್ರಾಮಸ್ಥರು ಬೆಚ್ಚಿಬಿದ್ದಾರೆ.
ಕಾಳಿಂಗ ಸರ್ಪ ಕಾಣಿಸಿಕೊಂಡ ತಕ್ಷಣವೇ ಸ್ಥಳೀಯರು ಉರಗ ರಕ್ಷಕರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಉರಗ ರಕ್ಷಕ ಜಾನ್ ಮೃತ್ಯುಂಜಯ ಅವರು ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪವನ್ನು ಸೆರೆ ಹಿಡಿದರು. ಸಾಕಷ್ಟು ಹರಸಾಹಸದ ಬಳಿಕ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಯಿತು.
ಬಳಿಕ ರಕ್ಷಿತಾರಣ್ಯಕ್ಕೆ ಕಾಳಿಂಗ ಸರ್ಪವನ್ನು ಬಿಡಲಾಯಿತು. ಕಾಳಿಂಗ ಸರ್ಪ ಸೆರೆ ಹಿಡಿಯುತ್ತಿದ್ದಂತೆ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರುಬಿಟ್ಟರು.