ಮುಖ್ಯ ರಸ್ತೆ ಕಾಮಗಾರಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪರಿಶೀಲನೆ.

ಹಿರಿಯಡಕ: ಉಡುಪಿ, ಮಣಿಪಾಲ, ಆತ್ರಾಡಿ, ಪರ್ಕಳ, ಹಿರಿಯಡಕ ಹಾಗೂ ಪೆರ್ಡೂರು ಮುಖ್ಯ ರಸ್ತೆ (ರಾಷ್ಟ್ರೀಯ ಹೆದ್ದಾರಿ 160 A) ಕಾಮಗಾರಿ ಪ್ರಗತಿಯಲ್ಲಿದ್ದು, ಜೂ.12ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಿರಿಯಡಕ, ಪೆರ್ಡೂರು, ಆತ್ರಾಡಿ ಭಾಗದ ವಿವಿಧ ಕಡೆಗೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ನಿರಂತರ ಮಳೆಯಾಗುತ್ತಿರುವುದರಿಂದ ಮಳೆ ನೀರು ಹಾದು ಹೋಗಲು ಸಮರ್ಪಕವಾದ ಚರಂಡಿ ನಿರ್ಮಿಸಿ ಗುಣಮಟ್ಟವನ್ನು ಕಾಯ್ದುಕೊಂಡು ಕಾಮಗಾರಿ ನಡೆಸುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಉಪಾಧ್ಯಕ್ಷರಾದ ದೇವು ಪೂಜಾರಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಮಂಜುನಾಥ್, ಸಹಾಯಕ ಅಭಿಯಂತರರಾದ ಮಂಜುನಾಥ್ ನಾಯಕ್, 80 ಬಡಗಬೆಟ್ಟು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್, ಬೊಮ್ಮರಬೆಟ್ಟು, ಪೆರ್ಡೂರು, ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯರು, ಶಕ್ತಿ ಕೇಂದ್ರದ ಪ್ರಮುಖರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.