ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಲೋಕಸಭಾ ಚುನಾವಣೆಗೆ ದಿಕ್ಸೂಚಿ: ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್

ಉಡುಪಿ: ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು,ಮುಂದಿನ ಲೋಕ ಸಭಾ ಚುನಾವಣೆ ಗೆ ಈ ಫಲಿತಾಂಶ ದಿಕ್ಸೂಚಿ ಯಾಗಲಿದೆಯೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜಸ್ತಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಘಡ್ ಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ದೇಶದ ಜನ ಬಿಜೆಪಿ ಪರ ಒಲವು ವ್ಯಕ್ತಪಡಿಸಿದ್ದಾರೆ.

ಪ್ರತಿಪಕ್ಷಗಳ ಅಪಪ್ರಚಾರ ನಡುವೆ ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿ ನಾಯಕತ್ವದ ವಿಚಾರಧಾರೆಗೆ ಜನ ಬೆಂಬಲ ನೀಡಿದ್ದು ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಕ್ಷವಾಗಿ ಮತ್ತೆ ಕೇಂದ್ರ ದಲ್ಲಿ ಆಡಳಿತ ನಡೆಸಲಿದ್ದು, ಈ ಗೆಲುವು ಪಕ್ಷ, ಸಂಘಟನೆ, ಕಾರ್ಯಕರ್ತರ ಗೆಲುವಾಗಿದೆಯೆಂದು ತಿಳಿಸಿದ್ದಾರೆ